Kannada NewsKarnataka News

*ಹಠಾತ್ ಹೃದಯಾಘಾತಕ್ಕೆ ಮತ್ತೋರ್ವ ಮಹಿಳೆ ಬಲಿ*

ಪ್ರಗತಿವಾಹಿನಿ ಸುದ್ದಿ: ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹಾಸನ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದು ಮಹಿಳೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಲೇಪಾಕ್ಷಿ (51) ಮೃತ ಮಹಿಳೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನನಗೆ ತೀವ್ರವಾದ ಸುಸ್ತಾಗುತ್ತಿದೆ. ಸಾಧ್ಯವಿಲ್ಲ ಎಂದು ಕುಳಿತಿದ್ದಾರೆ. ತಕ್ಷಣ ಪತಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಸ್ಪತ್ರೆಗೆ ಹೋಗುವಷ್ಟರಲ್ಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈಯರು ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button