Kannada NewsLatestNational

*ಮತ್ತೊಂದು ಭೀಕರ ಅಪಘಾತ: ರಾಜ್ಯದ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವ್ಯಾನ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಾಜ್ಯದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಅನ್ನಮಯ್ಯ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದ್ದು, ರಾಜ್ಯದ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 6 ಜನರ ಸ್ಥಿತಿ ಗಂಭೀರವಾಗಿದೆ.

ಕರಬಲಕೋಟ ಮಂಡಲದ ಚಿನ್ನಮರಿವಿಟ್ಟು ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಹಾಗೂ ಗಾಯಾಳುಗಳು ಕರ್ನಾಟಕದ ಬಾಗೇಪಲ್ಲಿಯವರು ಎಂದು ತಿಳಿದುಬಂದುದೆ. ಘಟನಾ ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button