Belagavi NewsBelgaum NewsKannada NewsKarnataka NewsNational
*ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಳೆದ 3-4 ದಿನಗಳಿಂದ ರಾಜ್ಯದಲ್ಲಿ ಸಾಧಾರಣಾ ಮಳೆ ಆಗುತ್ತಿದ್ದು, ಮುಂದಿನ ಎರಡು ದಿನ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿಮ ಗದಗ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ.