
ಪ್ರಗತಿವಾಹಿನಿ ಸುದ್ದಿ: ಸಿಎಂ ಬದಲಾವಣೆ ವಿಚಾರವಾಗಿ ರಾಮನಗರ ಶಾಸಕ ಹೆಚ್.ಎ.ಇಕ್ಬಾಲ್ ಹುಸೇನ್ ಬಹಿರಂಗ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ಮಾಧ್ಯಮಗಳ ಮುಂದೆ ಮುಖ್ಯಮಂತ್ರಿಗಳ ಬದಲಾವಣೆ ವಿಷಯದಲ್ಲಿ, ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಬಹಿರಂಗ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
`ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಕಾರಣ ಕೇಳಿ ನೋಟೀಸ್ ನೀಡಲಾಗಿದೆ. ತಾವುಗಳು ಈ ನೋಟೀಸ್ ತಲುಪಿದ ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಲು ಸೂಚಿಸಲಾಗಿದ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
ಈ ಮೂಲಕ ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವ ಕಾಂಗ್ರೆಸ್ ನಾಯಕರಿಗೆ ಈ ಮೂಲಕ ಕೆಪಿಸಿಸಿ ಬಿಸಿ ಮುಟ್ಟಿಸಿದೆ.