

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಸದಸ್ಯತ್ವ ಅನರ್ಹತೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮಂಗೇಶ್ ಪವಾರ್, ಪಾಲಿಕೆ ಸದಸ್ಯ ಜಯಂತ್ ಸದಸ್ಯತ್ವ ರದ್ದು ಮಾಡಿ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ರಾಜ್ಯ ಸರ್ಕಾರ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಮಂಗೇಶ್ ಪವಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಬೆಳಗಾವಿ ಮೇಯರ್ ಹಾಗೂ ಸದಸ್ಯ ಜಯಂತ ಸದಸ್ಯತ್ವ ರದ್ದು ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಜ್ಞೆ ನೀಡಿದೆ.