
ಪ್ರಗತಿವಾಹಿನಿ ಸುದ್ದಿ: ಹೈದ್ರಾಬಾದ್ ನ ಸಂಗರೆಡ್ಡಿಯಲ್ಲಿರುವ ಔಷಧ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಕರ್ತರು ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿಸಿದ್ದು, ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆ ಆಗಿದೆ.
ಈಗಾಗಲೇ ಬಹುತೇಕ ಶವಗಳನ್ನು ಹೊರತೆಗೆಯಲಾಗಿದ್ದು, ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮೂವರು ಕೂಡ ಅಸುನೀಗಿದ್ದಾರೆ.
ಅಂತಿಮ ಹಂತದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಸತ್ತವರಲ್ಲಿ ಕೆಲವರ ದೇಹ ಸಂಪೂರ್ಣ ಸುಟ್ಟುಹೋಗಿದ್ದು ಗುರುತು ಪತ್ತೆಹಚ್ಚಲು ಡಿಎನ್‌ಎ ಟೆಸ್ಟ್ ಮಾಡಲಾಗುವುದು ಎಂದು ಉನ್ನತ ಮಟ್ಟದ ಅಧಿಕಾರಿಗಳು ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ 1 ಕೋಟಿ ರೂ, ತೀವ್ರ ಗಾಯಗೊಂಡವರಿಗೆ 10 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 5 ಲಕ್ಷ ರೂ. ಪರಿಹಾರವನ್ನು ಅವರು ಘೋಷಿಸಲಾಗಿದೆ. ಕಾರ್ಖಾನೆ ಆಡಳಿತ ಮಂಡಳಿ ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.