
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಾಸನ ಜಿಲ್ಲೆಯಲ್ಲಂತೂ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಈ ನಡುವೆ ಕಲಬುರಗಿ, ಶಿವಮೊಗ್ಗ, ದಾವಣಗೆರೆ, ಯಾದಗಿರಿ ಜಿಲ್ಲೆಗಳಲ್ಲಿಯೂ ಹೃದಯಾಘಾತದಿಂದ ಸಾವು ಸಂಭವಿಸಿದೆ. ಇದೀಗ ಚಿಕ್ಕಮಗಳೂರಿನಲ್ಲಿ ಯುವಕ ಸಾವನ್ನಪ್ಪಿದ್ದಾರೆ.
29 ವರ್ಷದ ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವಾನಿ ಗ್ರಾಮದಲ್ಲಿ ನಡೆದಿದೆ. ಹರೀಶ್ (29) ಮೃತ ಯುವಕ.
ತೆಂಗಿನಕಾಯಿ ವ್ಯಾಪಾರಿಯಾಗಿದ್ದ ಯುವಕನಿಗೆ ಇದ್ದಕ್ಕಿದ್ದಂತೆ ವಾಂತಿಯಾಗಿದೆ. ವಿಪರೀತ ಗ್ಯಾಸ್ಟ್ರಿಕ್ ಎಂದು ಮಾತ್ರೆ ಸೇವಿಸಿ ಮಲಗಿದ್ದ ಯುವಕನಿಗೆ ಮತ್ತೆ ವಾಂತಿಯಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಮನೆಯವರು ಅಜ್ಜಂಪುರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಮಾರ್ಗ ಮಧ್ಯೆಯೇ ಯುವಕ ಕೊನೆಯುಸಿರೆಳೆದಿದ್ದಾರೆ.