Kannada NewsKarnataka NewsLatest
*ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅತಿ ಹೆಚ್ಚು ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲಿಯೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಈ ನಡುವೆ ಕೆಲ ಜಿಲ್ಲೆಗಳಲ್ಲಿ ವರುನಾರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಶಿವಮೊಗ್ಗ, ಚಿಕ್ಕಮಗೂರುಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ನಾಳೆ ಚಿಕ್ಕಮಗಳೂರು, ಶಿವಮೊಗ್ಗ ಹಾಸನದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ಬಯಲು ಪ್ರದೇಶದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಮತ್ತು ಬೆಟ್ಟಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.