
ಪ್ರಗತಿವಾಹಿನಿ ಸುದ್ದಿ : ಮಳೆ ಆರ್ಭಟ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲ ಭಾಗಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಜುಲೈ 9 ರ ವರೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಶಾಲಾಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಪೈಕಿ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು ಮುನ್ನೆಚ್ಚರಿಕಾ ಕ್ರಮವಾಗಿ, ಕಳಸಾ, ಮೂಡಿಗೆರೆ, ಶೃಂಗೇರಿ, ಕೊಪ್ಪ ಎನ್.ಆರ್ ಪುರ, ಜಾಗರ, ಖಾಂಡ್ಯ ಆಲ್ಲೂರು, ವಸ್ತಾರೆ ಹೋಬಳಿಗಳಿಗೆ ಮಾತ್ರ ಈ ರಜೆ ಅನ್ವಯವಾಗುವಂತೆ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರೀ ಮಳೆಯಾಗಿದ್ದು ಬೆಳ್ತಂಗಡಿಯ ಲ್ಯಾಲ ಗ್ರಾಮದ ಅಂಕಾಜೆ ನಿನ್ನಿಕಲ್ಲು ಎಂಬಲ್ಲಿಯ ಜೋಕಿಂ ಸಿಕ್ಕೇರ ಮಾಲಕತ್ವದ ಎರಡು ಮನೆಗಳ ಛಾವಣಿಗೆ ಹಾನಿಯಾಗಿದೆ. ಹಂಚು, ಶೀಟು ಹಾರಿ ಹೋಗಿದ್ದು ಮನೆಯಲ್ಲಿದ್ದ ನಾಲ್ಕು ಜನ ಅಪಾಯದಿಂದ ಪಾರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿದ್ದು ಈ ಹಿನ್ನಲೆ ದಾಂಡೇಲಿ ಹಾಗು ಜೋಯಿಡಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.