Belagavi NewsBelgaum NewsKannada NewsKarnataka News
*ಮುಂದಿನ 6 ದಿನ ಭಾರಿ ಮಳೆ: 6 ಜಿಲ್ಲೆಯಲ್ಲಿ ರೆಡ್ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆರಾಯ ಎಲ್ಲಡೆ ಸುರಿಯುತ್ತಿದ್ದು, ಮುಂದಿನ 6 ದಿನ ಅಂದರೆ ಜುಲೈ 10ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಯಾಗುವ ಮುನ್ಸೂಚನೆಯನ್ನು ಕೂಡ ಹವಾಮಾನ ಇಲಾಖೆ ನೀಡಿದೆ.
ಇಂದು ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು,
ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.