
ಪ್ರಗತಿವಾಹಿನಿ ಸುದ್ದಿ: ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯ ಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಬೆತ್ತಲೆಯಾಗಿ ಫಾರೆಸ್ಟ್ ಗಾರ್ಡ್ ಶರತ್ (೩೩) ಮೃತದೇಹ ಪತ್ತೆಯಾಗಿದೆ. ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರಿನವರು. ಕಳೆದ ಹತ್ತು ದಿನಗಳಿಂದ ಏಕಾಏಕಿ ನಾಪತ್ತೆಯಾಗಿದ್ದರು.
ಇದೀಗ ಸಖರಾಯ ಪಟ್ಟಣದ ಬಳಿ ನೀಲಗಿರಿ ಪ್ಲಾಂಟೇಶನ್ ನಲ್ಲಿ ಶವವಾಗಿ ಪತ್ತೆಯಗೈದ್ದು, ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.