Belagavi NewsBelgaum News
*BREAKING*: *ಜಾತ್ರೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ!* *FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಗೋಕಾಕ್ ಜಾತ್ರೆಯಲ್ಲಿ ಪುಂಡಾಟ ಮೆರೆದಿದ್ದಾರೆ. ಬಂದೂಕಿನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸಿರುವ ಘಟನೆ ನಡೆದಿದೆ.
ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲಿ, ಸಾರ್ವಜನಿಕರ ಮಧ್ಯೆ ಕೈಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿದ್ದಾರೆ. ಶಾಸಕನ ಪುತ್ರನ ಮೊಂಡಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆಲದಿನಗಳ ಹಿಂದೆ ಬೆಳಗಾವಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ನಡು ರಸ್ತೆಯಲ್ಲಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸಿದ್ದರು. ಘಟನೆ ಬೆನ್ನಲ್ಲೇ ಗ್ರಾಮ ಪಂಚಾಯತ್ ಸದಸ್ಯರನ್ನು ಬಂಧಿಸಲಾಗಿತ್ತು. ಇದೀಗ ಶಾಸಕರ ಪುತ್ರ ಜಾತ್ರೆಯಲ್ಲಿ ಸಾರ್ವಜನಿಕರ ಮಧ್ಯೆ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ್ದು, ಪೊಲೀಸರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಕಾದು ನೋಡಬೇಕಿದೆ.