Belagavi NewsBelgaum NewsKannada NewsKarnataka News
BREAKING: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ FIR ದಾಖಲು

ಪ್ರಗತಿವಾಹಿನಿ ಸುದ್ದಿ: ಜಾತ್ರೆಯಲ್ಲಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದೆ.
ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಜಿಲ್ಲೆ ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲಿ, ಸಾರ್ವಜನಿಕರ ಮಧ್ಯೆ ಕೈಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿದ್ದಾರೆ. ಶಾಸಕನ ಪುತ್ರನ ಮೊಂಡಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಂತೋಷ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಾಗಿದೆ.