Belagavi NewsBelgaum NewsKarnataka News

*ಬೆಳಗಾವಿ: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ*

ಪ್ರಗತಿವಾಹಿನಿ ಸುದ್ದಿ: ಲಂಚ ಪಡೆಯುತ್ತಿದ್ದಾಗಲೇ ಭೂ ಮಾಪಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿಯ ಯಮಕನಮರಡಿಯಲ್ಲಿ ಈ ಘಟನೆ ನಡೆದಿದೆ. ಭೂ ಮಾಪಕ ಬಸವರಾಜ್ ಕಡಲಗಿ ಲೋಕಾಯುಕ್ತ ಬಲೆಗೆ ಬಿದ್ದವರು. 11E ನಕ್ಷೆ ತಯಾರಿ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಪ್ರಕಾಶ್ ಮೈಲಾಕಿ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Home add -Advt


Related Articles

Back to top button