Belagavi NewsBelgaum NewsKarnataka News
*ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ ನಡೆದಿದೆ. ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಜಹೀರ್ ಹಲ್ಲೆಗೊಳಗಾದ ವಕೀಲರು. ಕೇಸ್ ಮುಗಿಸಿ ಹೊರ ಬಂದ ಜಹೀರ್ ಮೇಲೆ ಕೋರ್ಟ್ ಆವರಣದಲ್ಲಿಯೇ ದುಷ್ಕರ್ಮಿಗಳು ಕಲ್ಲು, ರಾಡ್ ಗಳಿಂದ ಹಲ್ಲೆ ನಡೆಸಿದ್ದಾರೆ.
ಜಹೀರ್ ಅವರ ತಲೆ, ಕಿವಿ, ಮೂಗು, ಹೊಟ್ಟೆಯ ಭಾಗಕ್ಕೆ ಗಂಭೀರವಾದ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಮೀನು ವ್ಯಾಜ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ವಿಚಾರಣೆ ಮುಗಿಸಿ ಹೊರ ಬರುತ್ತಿದ್ದಂತೆಯೇ ವಕೀಲರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ.
ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.