Kannada NewsKarnataka NewsLatest

*ಧಾರಾಕಾರ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಈ ನಡುವೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles
Home add -Advt

ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಮೈಸೂರು, ಕೋಲಾರ, ತುಮಕೂರು, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.


Related Articles

Back to top button