*ಮುಂದಿನ ನಾಲ್ಕು ದಿನ ಧಾರಾಕಾರ ಮಳೆ: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಹಲವಡೆ ಉತ್ತಮ ಮಳೆ ಆಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿದು ಮುಂಗಾರು ದುರ್ಬಲವಾಗುತ್ತಿರುವ ಹಿನ್ನಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಲೇ ಇದ್ದು ಅದರಲ್ಲೂ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಮಳೆ ನಿಲ್ಲುತ್ತಲೆ ಇಲ್ಲ. ಇದರ ನಡುವೆಯೇ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ವರದಿಯಾಗಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಅಂದರೆ ಜುಲೈ 14 ರ ವರೆಗೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಅದರಲ್ಲೂ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಾಯುಭಾರ ಕುಸಿತದ ಹಿನ್ನಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಜೊತೆಗೆ ಗಾಳಿ ಕೂಡ ಗಂಟೆ 40 ರಿಂದ 50 ಕಿಮೀ ವೇಗದಲ್ಲಿ ಬೀಸುತ್ತಿದ್ದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಲ್ಲರೂ ಸುರಕ್ಷಿತ ಸ್ಥಳದಲ್ಲಿ ಇರುವಂತೆ ಮನವಿ ಮಾಡಿದೆ.