
ಪ್ರಗತಿವಾಹಿನಿ ಸುದ್ದಿ: ಎಂಆರ್ ಪಿಎಲ್ ಘಟಕದಲ್ಲಿ ವಿಷಾನೀಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿರುವ ಘಟನೆ ಮಂಘಳೂರಿನಲ್ಲಿ ನಡೆದಿದೆ.
ಮಂಗಳೂರು ಹೊರವಲಯದ ಸೂರತ್ಕಲ್ ನಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ದೀಪಚಂದ್ರ ಭಾರ್ತಿಯಾ, ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ.
ವಿಷಾನೀಲ ಸೋರಿಕೆಯಾಗಿ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿಗಳನ್ನು ಆಸೊಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವಿನಾಯಕ ಮೈಗೇರಿ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.