
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ. ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಕೊಳ್ಳೆಗಾಲದಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ಆರ್ ಪಿಕೆ ಖಾಸಗಿ ಬಸ್ ಚಾಲಕನಿಗೆ ಬಸ್ ಚಲಾಯಿಸುತ್ತಿದ್ದಗಲೇ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಗುರುಸಿದ್ದಪ್ಪ (55) ಮೃತ ದುರ್ದೈವಿ. ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.