
ಪ್ರಗತಿವಾಹಿನಿ ಸುದ್ದಿ: ಹಾಸನದಿಂದ ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ಸ್ನಾಯಕ್ಕೆ ಹೋಗಿ ನಾಪತ್ತೆ ಆಗಿರುವ ಘಟನೆ ನಡೆದಿದೆ.
ತುಂಗಭದ್ರಾ ನದಿಯ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಯುವಕರು ಈಜಲು ಹೋಗಿದ್ದ ವೇಳೆ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ನದಿ ಪಾತ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿತ್ತು. ಯುವಕರು ನಿರ್ಲಕ್ಷ್ಯ ತೋರಿ ಅಪಾಯಕ್ಕೆ ಸಿಲುಕಿದ್ದಾರೆ.
ಅಜಿತ್ (20), ಸಚಿನ್ (20) ಹಾಗೂ ಪ್ರಮೋದ್ (19) ಎಂದು ಗುರುತಿಸಲಾಗಿದೆ. ಈಜುಗಾರರ ತಂಡ ಯುವಕರಿಗಾಗಿ ಸಂಜೆವರೆಗೂ ಶೋಧಕಾರ್ಯ ನಡೆಸಿದ್ದು, ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.