Kannada NewsKarnataka NewsNationalPolitics
*ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರ್ ಡಿಕ್ಕಿ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಮೈಸೂರು ಬೆಂಗಳೂರು ಹೆದ್ದಾರಿಯ ರಾಮನಗರದ ಜಯಪುರ ಗೇಟ್ ಬಳಿ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಬೆಳ್ಳಂ ಬೆಳಗ್ಗೆ ನಡೆದಿದೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕುಟುಂಬವೊಂದ ಮೂವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದುರಂತದಲ್ಲಿ ಓರ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕಾರ್ ಅತಿಯಾದ ವೇಗದಲ್ಲಿದ್ದ ಕಾರಣ ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ರಾಮನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.