
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಸಭೆಗೆ ನಾಲ್ವರನ್ನು ನಾಮನಿರ್ದೇಶನ ಮಾಡಿದ್ದಾರೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ.ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.
ಸಂವಿಧಾನದ 80(1)(ಎ) ವಿಧಿಯಡಿಯಲ್ಲಿ ನೀಡಲಾದ ವಿಶೇಷ ಅಧಿಕಾರದ ಅನ್ವಯ ರಾಷ್ಟ್ರಪತಿ ದೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ.