Belagavi NewsBelgaum NewsKannada NewsKarnataka NewsNationalPolitics

*ಮೂರು ದಿನ ಮುಂಗಾರು ಅಬ್ಬರ: ಈ ಮೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ* 

ಪ್ರಗತಿವಾಹಿನಿ ಸುದ್ದಿ: ಮುಂದಿನ ಮೂರು ದಿನ ಮುಂಗಾರು ಅಬ್ಬರ ಮತ್ತಷ್ಟು ಹೆಚ್ಚಾಗಲಿದೆ. ಜುಲೈ 17ರ ಬಳಿಕ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಅತೀ ಹೆಚ್ಚು ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

Home add -Advt

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗಲಿದೆ.

ಹಾಗೆಯೇ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Related Articles

Back to top button