
ಪ್ರಗತಿವಾಹಿನಿ ಸುದ್ದಿ: ಡ್ರಗ್ಸ್ ಪೂರೈಕೆಯಲ್ಲಿ ಕಲಬುರಗಿ ಜಿಲ್ಲೆಯ ಕಾಂಗ್ರೆಸ್ ಶಾಸಕನ ಆಪ್ತ ಮಹಾರಾಷ್ಟ್ರ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ.
ಡ್ರಗ್ಸ್ ಮಾರಾಟ ಆರೋಪದಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಆಪ್ತ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರದ ಕಲ್ಯಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ವೇಳೆ ಅಲ್ಲಿನ ಕಲ್ಯಾಣ ಠಾಣೆ ಪೊಲೀಸರು ಲಿಂಗರಾಜ್ ಕಣ್ಣಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಬಂಧಿತರ ಬಳಿ ನಿಷೇಧಿತ 120 ಕೊಡೆನೈನ್ ಸಿರಪ್ ಬಾಟಲ್ ಇತ್ತು ಎನ್ನಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆ ಅಡಿ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://pragativahini.com/priyanka-jarakiholibelagavi