Belagavi NewsBelgaum NewsKannada NewsKarnataka NewsNational

*ಬಹುತೇಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂದಿನ 2-3 ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಹಲವು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಸಾಧಾರಣಾ ಮಳೆಯಾಗಲಿದೆ.

ಹಾಗೆಯೇ ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಸಾಧಾರಣ ಮಳೆ ಆಗಲಿದೆ ಎಂದು ಅಂದಾಜಿಸಲಾಗಿದೆ. ಬಹುತೇಕ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎನ್ನಲಾಗಿದೆ.

Related Articles

Back to top button