
ಪ್ರಗತಿವಾಹಿನಿ ಸುದ್ದಿ : ನಿನ್ನೆ ಅನಾರೊಗ್ಯದ ಕಾರಣ ನಿಧನವಾಗಿರುವ ಹಿರಿಯ ನಟಿ ಬಿ.ಸರೋಜಾದೇವಿ (87) ಅವರ ಅಂತ್ಯಕ್ರಿಯೆ ಇಂದು ನೆರವೇರಲಿದೆ.
87 ವರ್ಷದ ನಟಿ ಬಿ.ಸರೋಜಾದೇವಿ ಸೋಮವಾರ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದು, ನಿನ್ನೆ ಸಾಯಂಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಇಂದು ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಇಂದು ಬೆಳಗ್ಗೆ 11.30 ರ ಸುಮಾರಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದ್ದು, ಪತಿ ಹರ್ಷ ಅವರ ಸಮಾಧಿ ಪಕ್ಕದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.