Kannada NewsKarnataka News
*ಮೀನುಗಾರರು ಸುರಕ್ಷಿತವಾಗಿ ಮರಳಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥನೆ* *ನೀರು ಪಾಲಾದವರ ಹುಡುಕಾಟಕ್ಕೆ ಸಚಿವರ ಸೂಚನೆ*



ಪ್ರಗತಿವಾಹಿನಿ ಸುದ್ದಿ, *ಉಡುಪಿ:* ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಘಟನೆ ತಿಳಿದ ತಕ್ಷಣವೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಮೀನುಗಾರರ ಪತ್ತೆಗೆ ಅಗತ್ಯ ಕ್ರಮಕೈಗೊಳ್ಳಲು ಸೂಚನೆ ನೀಡಿದರು.

ಮೂವರನ್ನು ಸುರಕ್ಷಿತವಾಗಿ ಕರೆತರಲು ಕಾರ್ಯಾಚರಣೆ ನಡೆಸುವಂತೆ ಕರಾವಳಿ ಕಾವಲು ಪಡೆಗೂ ಸೂಚನೆ ನೀಡಿದರು.
ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
ನಾಲ್ವರು ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ನಾಡದೋಣಿ ಮಗುಚಿದ್ದು, ಓರ್ವ ಈಜಿ ದಡ ಸೇರಿದ್ದಾನೆ. ಉಳಿದ ಮೂವರು ನೀರು ಪಾಲಾಗಿದ್ದಾರೆ.