
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಾತ್ರವಲ್ಲ, ದೇಶದ ಹಲವೆಡೆಗಳಲ್ಲಿ ಹೃದಯಾಘಾತದ ಸಾವು ಹೆಚ್ಚುತ್ತಿದೆ. ಚಿಕ್ಕ ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. 9ನೇ ತರಗತಿ ವಿದ್ಯಾರ್ಥಿನಿ ಹೃದಯಗಹಾತಕ್ಕೆ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಸಿಕಾರ್ ಪಟ್ಟಣದ ಆದರ್ಶ್ ವಿದ್ಯಾ ಮಂದರಿದಲ್ಲಿ ಈ ಘಟನೆ ನಡೆದಿದೆ. 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶಾಲೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಶಾಲೆಯಲ್ಲಿ ಊಟ ಮಾಡಲೆಂದು ಬಾಕ್ಸ್ ಓಪನ್ ಮಾಡುತ್ತಿದ್ದಳು. ಊಟದ ಡಬ್ಬಿಯ ಮುಚ್ಚಳ ತೆಗೆಯುತ್ತಿದ್ದಂತೆಯೇ ವಿದ್ಯಾರ್ಥಿನಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಬಾಲಕಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.