Kannada NewsKarnataka NewsPolitics

*ನಂಬಿಸಿ ಯುವತಿಗೆ ಕೈಕೊಟ್ಟ ಶಾಸಕ ಪ್ರಭು ಚವ್ಹಾಣ ಪುತ್ರ: ಮಹಿಳಾ ಆಯೋಗಕ್ಕೆ ದೂರು*

ಪ್ರಗತಿವಾಹಿನಿ ಸುದ್ದಿ: ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚೌಹಾಣ್ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಬಳಿಕ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದು ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ.

ಇದೀಗ ಅದೇ ವಿಚಾರಕ್ಕೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ ಲೈಂಗಿಕ ಸಂಬಂಧ ಬೆಳೆಸಿ ಬಳಿಕ ಕೈಕೊಟ್ಟಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದು ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಳೆ. 

2023ರ ಡಿಸೆಂಬರ್ 25ರಂದು ಎರಡು ಮನೆಯವರು ಒಪ್ಪಿಗೆ ಸೂಚಿಸಿದ ಬಳಿಕ ಪ್ರತೀಕ್ ಜೊತೆ ನಿಶ್ಚಿತಾರ್ಥ ಮಾಡಿದ್ದರು. ನಿಶ್ಚಿತಾರ್ಥದ ನಂತರ ಪ್ರತೀಕ್ ಜೊತೆ ಇನ್ನಷ್ಟು ಹೊಂದಾಣಿಕೆಗಾಗಿ ಸ್ವಲ್ಪ ದಿನ ಒಟ್ಟಿಗೆ ಇರಿ ಎಂದು ನಮ್ಮಿಬ್ಬರನ್ನು ಕಳುಹಿಸಿ ಕೊಟ್ಟಿದ್ದರು. ಅದರಂತೆ ಪ್ರತೀಕ್ ನನ್ನನ್ನು ಮಹಾರಾಷ್ಟ್ರದ ಲಾತೂರ್ ಗೆ ಕರೆದುಕೊಂಡು ಹೋಗಿದ್ದ. ಆ ವೇಳೆ ಪ್ರತೀಕ್ ನಾವಿಬ್ಬರೂ ಮದುವೆಯಾಗುತ್ತಿದ್ದೇವೆ ಎಂದು ಹೇಳಿ ಒತ್ತಾಯಪೂರ್ವಕವಾಗಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ವಾಪಸ್ ಮನೆಗೆ ಹೋಗಿ ಮದುವೆ ಬಗ್ಗೆ ಮಾತಾಡಿದರೆ ಕೆಲ ತಿಂಗಳು ಹೋಗಲಿ ಎಂದು ಮುಂದೂಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಅಲ್ಲದೆ ಪ್ರಭು ಚೌಹಾಣ್ ಅವರ ಮನೆಗೆ ಹೋಗಿ ನನ್ನ ಪೋಷಕರು ಮದುವೆ ಬಗ್ಗೆ ಕೇಳಿದ್ದಕ್ಕೆ ಗಲಾಟೆ ಮಾಡಿ, ನಮ್ಮ ಮನೆಯವರನ್ನ ಬಡವರು ಎಂದು ಹೀಯಾಳಿಸಿ ಅವಮಾನ ಮಾಡಿ ಕಳಿಸಿದ್ದರು. ಇದೇ ವಿಚಾರಕ್ಕೆ ಎರಡು ಕುಟುಂಬದ ನಡುವೆ ಗಲಾಟೆಯಾಗಿ ಹೊಡೆದಾಡಿಕೊಂಡಿದ್ದರು.

Home add -Advt

ಈ ವೇಳೆ ಪ್ರತೀಕ್ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಜುಲೈ 6ರಂದು ಔರಾದ್‌ನ ಹೋಕ್ರಾಣ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಆದ್ರೆ, ಶಾಸಕರು ಎಂದು ಪೊಲೀಸರು ದೂರನ್ನ ಸ್ವೀಕಾರ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾಳೆ.

Related Articles

Back to top button