Kannada NewsKarnataka NewsLatest

*ಮುಂದಿನ 4-5 ದಿನ ಅಬ್ಬರಿಸಲಿದೆ ಮಳೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ 4-5 ದಿನ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಕೊಡಗು, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 

ಶಿವಮೊಗ್ಗ ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾಗೆಯೇ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ,ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Back to top button