Kannada NewsKarnataka NewsLatest

*ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದು, ಸಾರಿಗೆ ನೌಕರರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.

ಕೆ.ಎಸ್ ಆರ್ ಟಿಸಿ, ಬಿಎಂಟಿಸಿ, ಎನ್ ಡಬ್ಲ್ಯೂ ಕೆ ಎಸ್ ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ಧಿಷ್ಟಾವಧಿಗೆ ಮುಷ್ಕರಕ್ಕೆ ಕರೆ ನೀಡಿದೆ.

ಕಾರ್ಮಿಕ ಇಲಾಖೆ ಸಾರಿಗೆ ನೌಕರರಿಗೆ ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಿದೆ. ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ಅಡಿ ಇಂದಿನಿಂದ ಆರು ತಿಂಗಳು ನೌಕರರು ಯಾವುದೇ ಮುಷ್ಕರದಲ್ಲಿ ಭಾಗಿಯಾಗುವಂತಿಲ್ಲ. ಜುಲೈ 1ರಿಂದ ಡಿಸೆಂಬರ್ 12ರವರೆಗೆ ನಿಗಮದಲ್ಲಿ ಮುಷ್ಕರಕ್ಕೆ ನಿರ್ಬಂಧ ವಿಧಿಸಿ ಕೆ.ಎಸ್.ಆರ್.ಟಿ.ಸಿ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.

Home add -Advt

Related Articles

Back to top button