*ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಒಂದು ದಿನದ ಕಾರ್ಯಾಗಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮ ಹಾಗೂ ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಜಿಲ್ಲಾ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಐ ಪಿ ಗಡಾದ್ ಮಾತನಾಡಿ ಜೀವನ ಆಯ್ದುಕೊಳ್ಳಿ ತಂಬಾಕನ್ನಲ್ಲ, ತಂಬಾಕು ತ್ಯಜಿಸಿ ಮರಣ ಪ್ರಮಾಣ ಕಡಿಮೆ ಮಾಡಲು ತಿಳಿಸಿದರು.
ಪ್ರಾಸ್ಥಾವಿಕವಾಗಿ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾ ಹಾಗೂ ತಂಬಾಕು ನಿಯಂತ್ರಾಧಿಕಾರಿ ಡಾ. ಎಸ್ ಎಸ್ ದೂಡ್ಡಮನಿ ಅವರು, ತಂಬಾಕು ದುಷ್ಪರಿಣಾಮದ ಕುರಿತು ತಮ್ಮ ಕರ‍್ಯಕ್ಷೇತ್ರದಲ್ಲಿ ಜಾಗೃತಿ ಮೂಡಿಸಿ ಕಾರ‍್ಯಕ್ರಮ ಹಮ್ಮಿಕೊಂಡು ಕಾರ್ಯಪ್ರವೃತ್ತರಾಗಲು ತಿಳಿಸಿದರು.
ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಚಾಂದನಿ ಮಾತನಾಡಿ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ದೊರೆಯುವ ಸೇವಾ ಸೌಲಭ್ಯಗಳ ಕುರಿತು ಸರ‍್ವಜನಿಕರಿಗೆ ತಿಳಿಸಬೇಕು ಆರೋಗ್ಯಯುತ ಸಮಾಜ ನರ‍್ಮಾಣ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಪಾತ್ರ ಅತಿ ಮುಖ್ಯವಾಗಿದೆ ಎಂದು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದಂತಹ ರಾಷ್ಟ್ರೀಯ ತಂಬಾಕು ನಿಯಂತ್ರಣಾಧಿಕಾರಿ ಡಾ. ಉಪೇಂದ್ರ ರಾಜ್ಯ ಕಾರ್ಯಕ್ರಮ ಸಂಯೋಜಕರು ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಂಗಳೂರ, ರಾಜೇಶ್ ವಿಭಾಗಿಯ ಸಂಯೋಜಕರು ರಾಜ್ಯ ತುಂಬಾ ಘಟಕ ಬೆಂಗಳೂರು. ಮಹಾಂತೇಶ್ ಉಳ್ಳಾಗಡ್ಡಿ. ವಿಭಾಗದ ಮುಖ್ಯಸ್ಥರು ಸರ‍್ವಜನಿಕ ದಂತ ಆರೋಗ್ಯ ವಿಭಾಗ ಕೆಎಲ್‌ಇ ವಿಕೆಐಡಿಎಸ್ ದಂತ ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಡಾ.ರೋಪಾಲಿ ಸಂಕೇಶ್ವರಿ. ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಲಭ್ಯ ಇರುವ ಸೌಲಭ್ಯಗಳ ಕುರಿತು ಕಾರ್ಯಾಗಾರದಲ್ಲಿ ವಿವರಿಸಿದರು
ಸ್ವಾಗತ ಭಾಷಣವನ್ನು ಜಿಲ್ಲಾ ಸಲಹೆಗಾರದ ಡಾ. ಶ್ವೇತಾ ಪಾಟೀಲ್ ಇವರು ನಡೆಸಿಕೊಟ್ಟರು, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾಜಿ ಮಾಳ್ಗನವರ್ ನಿರೂಪಿಸಿದರು.
ಕವಿತಾ ರಾಜಣ್ಣವರ್ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಬೆಳಗಾವಿ ಕಾರ್ಯಕ್ರಮವನ್ನು ವಂದಿಸಿದರು. ಈ ತರಬೇತಿ ಕರ‍್ಯಗಾರದಲ್ಲಿ ಆರೋಗ್ಯ ಇಲಾಖೆಯ ಆರೋಗ್ಯ ನೀರಕ್ಷಣಾಧಿಕಾರಿಗಳು ಹಾಗೂ ಆಶಾ ಹಿರೇಮಠ, ರಮೇಶ ಹೂಲಿಕೇರಿ, ಸಮುದಾಯ ಆರೋಗ್ಯ ಅಧಿಕಾರಿಗಳು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಸಿಬ್ಬಂದಿ ರ‍್ಗದವರು, ಆಶಾ ಮೆಂಟರ್ ತರಬೇತಿ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.