
ಪ್ರಗತಿವಾಹಿನಿ ಸುದ್ದಿ: ಭದ್ರತಾಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 6 ಮಾವೋವಾದಿಗಳು ಹತರಾಗಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.
ಇಲ್ಲಿನ ನಾರಾಯಣಪುರ ಜಿಲ್ಲೆಯ ಅಬುಜ್ ಮುದ್ ಪ್ರದೇಶದ ದಟ್ಟ ಅರಣ್ಯದಲ್ಲಿ ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 6 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಎನ್ ಕೌಂಟರ್ ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳು, ಎಕೆ-47 ರೈಫಲ್, ಎಸ್ ಎಲ್ ಆರ್ ರೈಫಲ್ ಗಳು ಪತ್ತೆಯಾಗಿವೆ.
ಈ ಪ್ರದೇಶದಲ್ಲಿ ಮಾವೋವಾದಿಗಳ ಚಲನವಲನಗಳ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಭದ್ರತಾಪಡೆ ಕಾರ್ಯಾಚರಣೆ ನಡೆಸಿದೆ.