
ಪ್ರಗತಿವಾಹಿನಿ ಸುದ್ದಿ: ಬೆಳವಟ್ಟಿ ಗ್ರಾಮದ ರವೀಂದ್ರ ಕಾಂಬಳೆ ಎನ್ನುವ ರೈತ ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು ಕಚ್ಚಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ರೈತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದೇ ವೇಳೆ ಲಕ್ಷ್ಮೀ ತಾಯಿ ಪೌಂಡೇಷನ್ ವತಿಯಿಂದ ಆರ್ಥಿಕ ಸಹಾಯ ಮಾಡಿದರು. ಜೊತೆಗೆ ಸರಕಾರದಿಂದ 2 ಲಕ್ಷ ರೂ. ಪರಿಹಾರ ನೀಡುವ ಹಾಗೂ ಮೃತನ ಪತ್ನಿಗೆ ಸೂಕ್ತ ಉದ್ಯೋಗ ಒದಗಿಸುವ ಭರವಸೆ ನೀಡಿದರು.