
ಪ್ರಗತಿವಾಹಿನಿ ಸುದ್ದಿ: ಬಟ್ಟೆ ಅಂಗಡಿ ವ್ಯಾಪಾರಿಗೆ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಣ್ಣೂರು ಲಾಡ್ಜ್ ನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಕವನಾ ಹಾಗೂ ಸೈಫ್ ಎಂದು ಗುರುತಿಸಲಾಗಿದೆ.
ಕಂಪಲಾಪುರದ ಬಟ್ಟೆ ಅಂಗಡಿ ಮಾಲೀಕ ದಿನೇಶ್ ಎಂಬುವವರನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದ ಜಾಲ, 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿತ್ತು. ಹನಿಟ್ರ್ಯಾಪ್ ಗ್ಯಾಂಗ್ ನಲ್ಲಿ ಹುಣಸೂರು ಪೊಲೀಸ್ ಕಾನ್ಸ್ ಟೇಬಲ್ ಶಿವಣ್ಣ ಕೂಡ ಭಾಗಿಯಾಗಿದ್ದ. ಈ ಬಗ್ಗೆ ದಿನೇಶ್ ಬೈಲುಕುಪ್ಪೆ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣ ಸಂಬಂಧ ಕಾನ್ಸ್ ಟೇಬಲ್ ಶಿವಣ್ಣ, ಆನಂದ್ ಹಾಗೂ ಮೂರ್ತಿ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಮುಖ ಆರೋಪಿಗಳಿಬ್ಬರೂ ತಲೆಮರೆಸಿಕೊಂಡಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.