*ಕೂಡಲಸಂಗಮ ಪೀಠಕ್ಕೆ ಹೊಸ ಶ್ರೀಗಳ ನೇಮಕಕ್ಕೆ ಚಿಂತನೆ: ವಿಜಯಾನಂದ ಕಾಶಪ್ಪನವರ*

ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಪೀಠಕ್ಕೆ ಹೊಸ ಶ್ರೀಗಳ ನೇಮಕಕ್ಕೆ ಚಿಂತನೆ ನಡೆದಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲಸಂಗಮ ಪೀಠದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಡವಳಿಕೆಯಲ್ಲಿ ಬದಲಾವಣೆಗಳಾಗಿವೆ ಎಂದು ಅರೋಪಿಸದರು.
ಬಸವತತ್ವ ಪ್ರತಿಪಾದನೆಗೆ ನೇಮಕಗೊಂಡಿದ್ದ ಸ್ವಾಮೀಜಿಗಳು ಅದನ್ನು ಬಿಟ್ಟು ಬೇರೆಲ್ಲವನ್ನೂ ಮಾಡುತ್ತಿದ್ದಾರೆ. ಒಂದು ಪಕ್ಷದ ಪರವಾಗಿ, ವ್ಯಕ್ತಿಯ ಪರವಾಗಿ ಮಾತನಾಡುತ್ತಿದ್ದಾರೆ ಎಂದರು.
ನಮ್ಮ ಸಮಾಜದವರ ಮೇಲೆ ಅನೇಕ ಕಡೆ ದಬ್ಬಾಳಿಕೆ, ದೌರ್ಜನ್ಯ ನಡೆದರೂ, ಅಲ್ಲಿಗೆ ಹೋಗದೇ ಪ್ರಚಾರದ ಗೀಳಿಗಾಗಿ ಇಲ್ಲ ಸಲ್ಲದ ಆರೋಪಾಡುತ್ತಿದ್ದಾರೆ. ಹೀಗಾಗಿ ಮುಂದೆ ಏನು ಮಾಡಬೇಕು ಅನ್ನೋ ಬಗ್ಗೆ ಹಿರಿಯರ ಜೊತೆ ಚರ್ಚೆ ಮಾಡಿದ್ದೇವೆ. ಪೀಠದ ರಕ್ಷಣೆ ಮಾಡುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವವರನ್ನು ಮಠಕ್ಕೆ ನೇಮಿಸುವ ಬಗ್ಗೆ ಚಿಂತನೆ ನಡೆದಿದ್ದು ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಪ್ರಕಟಿಸಲಿದ್ದೇವೆ” ಎಂದು ತಿಳಿಸಿದರು.