Belagavi NewsBelgaum NewsKannada NewsKarnataka News
*ಹಬ್ಬದ ಸಂದರ್ಭದಲ್ಲಿ ಜನರಿಗೆ ಅನುಕೂಲ ಮಾಡಿ: ಅಧಿಕಾರಿಗಳಿಗೆ ಶಾಸಕ ಆಸೀಫ್ ಸೇಠ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶ್ರಾವಣ ಮಾಸ ಆರಂಭ ಆಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರುತ್ತೆ. ಅದರಲ್ಲೂ ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹಾಗಾಗಿ ಶಾಸಕ ಆಸೀಫ್ ಸೇಠ್ ನಗರದಲ್ಲಿ ಅಧಿಕಾರಿಗಳ ಜೊತೆ ಮಿಂಚಿನ ಸಂಚಾರ ನಡೆಸಿದ್ದಾರೆ.
ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅಸೀಫ್ ಸೇಠ್ ಅವರು, ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿರುವುದರಿಂದ ಫೋರ್ಟ್ ರಸ್ತೆಯ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
ಹಬ್ಬದ ಸಮಯದಲ್ಲಿ ಸಾರ್ವಜನಿಕರಿಗೆ ಆಗುವ ಅನಾನುಕೂಲತೆ ಆಗದಂತೆ ನೋಡಿಕೊಳ್ಳಲು ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಉಳಿದ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಬ್ಬದ ಆಚರಣೆಯ ಸಮಯದಲ್ಲಿ ನಾಗರಿಕರು ಮತ್ತು ಭಕ್ತರಿಗೆ ಸುರಕ್ಷಿತ, ಸ್ವಚ್ಛ ರಸ್ತೆ ಇರಬೇಕು ಎಂದರು
ಪಾಲಿಕೆ ಆಯುಕ್ತೆ ಶುಭ, ಯುವ ನಾಯಕ ಅಮಾನ್ ಸೇಠ್, ಸ್ಥಳೀಯ ನಾಯಕರು ಮತ್ತು ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.