
ಪ್ರಗತಿವಾಹಿನಿ ಸುದ್ದಿ: ಮದುವೆಯಾಗುವುದಾಗಿ ನಿಶ್ಚಿತಾರ್ಥ ಮಾಡಿಕೊಂಡು ಅತ್ಯಾಚಾರವೆಸಗಿ ಮೋಸ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಪ್ರಭು ಚೌವ್ಹಾಣ್ ಪುತ್ರ ಪ್ರತೀಕ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೀದರ್ ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರತೀಕ್ ಚೌವ್ಹಾಣ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಯುವತಿ ಪ್ರತೀಕ್ ಚೌವ್ಹಾಣ್ ವಿರುದ್ಧ ಈ ಮೊದಲು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಇಂದು ಬೀದರ್ ಎಸ್ ಪಿ ಪ್ರದೀಪ್ ಗುಂಟಿ ಅವರಿಗೂ ದೂರು ನೀಡಿದ್ದರು. ಇದೀಗ ಪ್ರತೀಕ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸೆಕ್ಷನ್ 376 (2) (N) 366, 324, 506ರಡಿ ಪ್ರಕರಣ ದಾಖಲಾಗಿದೆ.