Belagavi NewsBelgaum NewsKannada NewsKarnataka News
*ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಮಾರ್ಕೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಜನದಟ್ಟಣೆಯಲ್ಲಿ ಬಸ್‌ನಿಂದ ಇಳಿಯುವ ಸಂದರ್ಭದಲ್ಲಿ ಬಂಗಾರದ ಆಭರಣ ಕಳ್ಳತನ ಆಗಿರುವ ಬಗ್ಗೆ ಪುಂಡಲೀಕ ಭೀಮಪ್ಪ ಲೆಂಕನ್ನವರ ಎಂಬುವರು ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಪ್ರಕಾಶ ವಿಜಯ ಜಾಧವ ಹಾಗೂ ಕಾಳಿದಾಸ ದಿಲೀಪ್ ಬರಡೆ ಎಂಬುವರನ್ನು ಬಂಧಿಸಿದ್ದಾರೆ.
ಈ ಪ್ರಕರಣಗಳಲ್ಲಿ ಕಳುವಾದ ಒಟ್ಟು 9,31,000 ರೂ. ಮೌಲ್ಯದ 95 ಗ್ರಾಂ ಬಂಗಾರ ವಶಪಡಿಸಿಕೊಂಡು ಇಬ್ಬರು ಆರೋಪಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗಿದೆ.