Belagavi NewsBelgaum NewsKannada NewsKarnataka News
*ರಾಜ್ಯದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆಯಾಗಲಿದ್ದು . ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 23 ಹಾಗೂ 24ರಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ. ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಹಾಗೆಯೇ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್, ಮತ್ತು ಯಾದಗಿರಿಯಲ್ಲಿ ಹಗುರ ಮಳೆಯಾಗಲಿದೆ ಎನ್ನಲಾಗಿದೆ.
ಜೊತೆಗೆ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಮತ್ತು ದಾವಣಗೆರೆಯಲ್ಲಿ ಜುಲೈ 25ರವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಈ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.




