
ಪ್ರಗತಿವಾಹಿನಿ ಸುದ್ದಿ : 12ಕ್ಕೂ ಹೆಚ್ಚು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದ, 7ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಆನೇಕಲ್ ನ ಕುರುಬರಪಳ್ಳಿ ಬಳಿಯ ಬೆಂಗಳೂರು – ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಿಣಿ ಅಪಘಾತ ಸಂಭವಿಸಿದೆ.
ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದರಿಂದ ವಾಹನಗಳು ನಿಧಾನವಾಗಿ ಸಾಗುತ್ತಿದ್ದವು. ಈ ವೇಳೆ ಹಿಂದಿನಿಂದ ರಭಸವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಮುಂದೆ ಸಾಗುತ್ತಿದ್ದ ಸುಮಾರು 12ಕ್ಕೂ ಹೆಚ್ಚು ವಾಹನಗಳಿಗೆ ಲಾರಿ ಡಿಕ್ಕಿ ಹೊಡೆದುಕೊಂಡು ಮುಂದೆ ಸಾಗಿ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂರು ಜನ ಸಾವನ್ನಪ್ಪಿದ್ದರೆ, 7ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ.
ಘಟನೆಯಿಂದಾಗಿ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮೃತದೇಹವನ್ನು ಮರಣೋತ್ತರ ಪರಿಕ್ಷೆಗೆ ರವಾನಿಸಿದ್ದಾರೆ.