Karnataka NewsLatest

*ಶಾಲೆಗೆ ಹೋಗಲು ತಯಾರಿ ನಡೆಸುತ್ತಿದ್ದಗಲೇ ಕುಸಿದು ಬಿದ್ದ ಶಿಕ್ಷಕಿ; ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಾಲೆಗೆ ಹೊರಡಲು ಸಿದ್ಧತೆ ನಡೆಸುತ್ತಿದ್ದಾಗಲೇ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂ೦ಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಭಕ್ತನಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಲೋಚನಾ (49) ಮೃತ ಶಿಕ್ಷಕಿ. ಇಂದು ಬೆಳಿಗ್ಗೆ ಸುಲೋಚಾ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ.

ಕುಸಿದು ಬಿದ್ದವರೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸುಲೋಚನಾ, ನೆಲಮಂಗಲದ ಬಸವಣ್ಣ ದೇವರ ಮಠದ ಶಾಲೆಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button