
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಇನ್ನೂ ಒಂದು ವಾರಗಳಕಾಲ ಭಾರಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಳೆ ಅವಾಂತರದಿಂದಾಗಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಜುಲೈ 31ರವರೆಗೂ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಆರು ದಿನಗಳ ಕಾಲ ವರುಣಾರ್ಭಟ ಜೋರಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.