
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಜಿಲ್ಲೆಯ ವಿವಿಧ ಗ್ರಾಮಗಳು, ನದಿ ತೀರದ ಜನರಿಗೆ ಅಲರ್ಟ್ ಘೋಷಿಸಲಾಗಿದೆ.
ದೂದಗಂಗಾ ನದಿ ಅಬ್ಬರದಿಂದಾಗಿ ಪ್ರವಾಹ ಪರಿಸ್ಥಿತಿ ನೀರ್ಮಾಣವಾಗಿದೆ. ನಿಪ್ಪಾಣಿ, ಚಿಕ್ಕೋಡಿ ತಾಲೂಕಿನ ಜನರು ನದಿ ತೀರಕ್ಕೆ ತೆರಳದಂತೆ ತಾಲೂಕು ಆಡಲಿತ ಕಟ್ಟೆಚ್ಚರಕ್ಕೆ ದ್ಸೂಚಿಸಿದೆ.
ನಿಪ್ಪಾಣಿ, ಚಿಕ್ಕೋಡಿ ತಾಲೂಕಿನ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ನದಿ ಪಾತ್ರಗಳಿಗೆ ತೆರಳದಂತೆ ಸೂಚಿಸಲಾಗಿದೆ.
ದೂದಗಂಗಾನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕೊಲ್ಲಾಪುರದ ರಾಧಾನಗರಿ ಸಂಪೂರ್ಣ ಜಲಾವೃತಗೊಂಡಿದೆ. ಮನೆಗಳು, ಗ್ರಾಮಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.