
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದು ವಿದ್ಯಾರ್ಥಿಗಳು ಸೇರಿ 7 ಜನರು ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ರಾಜಸ್ಥಾನದ ಝಲ್ವಾರ್ ನಲ್ಲಿ ನಿನ್ನೆ ಭಾರಿ ಮಳೆ ನಡುವೆ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದು ದುರಂತ ಸಂಭವಿಸಿತ್ತು. ಘಟನೆಯಲ್ಲಿ 6 ಮಕ್ಕಳು, ಓರ್ವ ಶಿಕ್ಷಕ ಸೇರಿ 7 ಜನರು ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ರಾಜಸ್ಥಾನ ಸರ್ಕಾರ ಐವರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಶಾಲೆ ಶಿಥಿಲಾವಸ್ಥೆಯಲ್ಲಿದ್ದರೂ ನಿರ್ಲಕ್ಷ ತೋರಿದ ಪರಿಣಾಮ ದುರಂತ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಸಸ್ಪೆಂಡ್ ಮಾಡಲಾಗಿದೆ.