Kannada NewsKarnataka NewsLatest
*ಮತ್ತೊಂದು ಭೀಕರ ಅಪಘಾತ: ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಿಸುತ್ತಿದ್ದ ಕಾರಿನ ಮೇಲೆ ಲಾರಿ ಪಲ್ಟಿಯಾಗಿ ಬಿದ್ದು ಕಾರಿನಲ್ಲಿದ್ದ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ. ಕಾರು ಅಪ್ಪಚ್ಚಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸಾವನ್ನಪಿದ್ದಾರೆ.
ಬಾಗಲಕೋಟೆ ಮೂಲದ ರಮೇಶ್ ಹೂಗಾರ್ ಹಾಗೂ ಇನ್ನೋರ್ವ ವ್ಯಕ್ತಿ ಮೃತರು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.