
ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬರಕ್ಕೆ ಸಿಲುಕಿ ಮೀನುಗಾರಿಕಾ ದೋಣಿ ಮುಳುಗಡೆಯಾಗಿ ಮೂವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅಲಿಬಾಗ್ ಬಳಿ ಈ ಘಟನೆ ನಡೆದಿದೆ. ಮೀನುಗಾರಿಕಾ ದೋಣಿಯಲ್ಲಿ 8 ಜನರಿದ್ದರು. ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದಿದೆ. ತಕ್ಷಣ ಐವರು ಮೀನುಗಾರರು ಈಜಿ ದಡ ಸೇರಿದ್ದಾರೆ. ಉಳಿದ ಮೂವರು ನಾಪತ್ತೆಯಾಗಿದ್ದಾರೆ.
ನಾಪತ್ತೆಯಾಗಿರುವ ಮೂವರು ಮೀನುಗಾರರಿಗೆ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ. ಭಾರಿ ಮಳೆಯಿಂದಾಗಿ ಸಮುದ್ರದಲ್ಲಿ ಅಲೆಗಳು ಅಬ್ಬರ ಜೋರಾಗಿದೆ. ಮೀನುಗಾರಿಕೆಗೆ ತೆರಳದಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದ್ದರೂ ನಿರ್ಲಕ್ಷ್ಯವಹಿಸಿ ನೀನುಗಾರಿಕೆಗೆ ತೆರಳಿದ್ದರು ಎನ್ನಲಾಗಿದೆ.