
ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ದುರಂತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕಿ ಕೊನೆಯುಸಿರೆಳೆದಿದ್ದಾರೆ. ಗಂಗಮ್ಮ ಮೃತ ಶಿಕ್ಷಕಿ. ಹುಬ್ಬಳ್ಳಿಯಲ್ಲಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಜುಲೈ 24ರಂದು ಹುಬ್ಬಳ್ಳಿಯ ಶಕ್ತಿನಗರದ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಶಿಕ್ಷಕಿ ಗಂಗಮ್ಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಗಂಗಮ್ಮ ಅವರ ದೇಹದ ಶೇ.65ರಷ್ಟು ಭಾಗ ಸುಟ್ಟುಹೋಗಿತ್ತು. ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದರು. ಶಿಕ್ಷಕಿ ಗಂಗಮ್ಮ ಚಿಕಿತ್ಸೆ ಫಲಕಾರಿಯಾಗಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.