*ಗೃಹ ಆರೋಗ್ಯ ಯೋಜನೆಗೆ ಚಾಲನೆ ಹಾಗೂ ಆಶಾ ಕೈಪಿಡಿ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೃಹ ಆರೋಗ್ಯ ಯೋಜನೆ ರಾಜ್ಯ ಸರಕಾರದ ಒಂದು ಮಹತ್ವಾಕಾಂಕ್ಷೆ ಯೋಜನೆಯಾಗಿದೆ. ಸರಕಾರದ ಈ ಯೋಜನೆ ಯಶಸ್ವಿ ಯಾಗಬೇಕಾದರೆ ವೈದ್ಯರ ಪಾತ್ರ ಅತೀ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ನುಡಿದರು.
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಸೋಮವಾರ (ಜು.28) ಜರುಗಿದ ಗೃಹ ಆರೋಗ್ಯ ಯೋಜನೆಗೆ ಚಾಲನೆ ಹಾಗೂ ಆಶಾ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಎನ್.ಸಿ.ಡಿ (ನಾನ್ ಕಮ್ಯುನಿಕೇಬಲ್ ಡಿಸಿಸ್) ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಗುರುತಿಸದರೆ ಅವುಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣ ಪಡಿಸಬಹುದಾಗಿದೆ. ಈ ಕುರಿತು ಪ್ರತಿ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ಪರೀಕ್ಷೆಗೆ ಮುಂದಾಗಿ ಚೌಷಧಿಗಳನ್ನು ತಲುಪಿಸುವ ಕಾರ್ಯವಾಗಬೇಕು. ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿರುವ ಗೃಹ ಆರೋಗ್ಯ ಯೋಜನೆ ಯಶಸ್ವಿಯಾಗಬೇಕಾದರೆ ಜಿಲ್ಲೆಯ ಎಲ್ಲ ವೈದ್ಯಾಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ಮುಂದಾಗುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಕರೇ ನೀಡಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ ದೊಡಮನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಜನರ ಆರೋಗ್ಯವನ್ನು ಕಾಪಾಡುವ ಉದ್ದೇಶದೊಂದಿಗೆ ಗೃಹ ಆರೋಗ್ಯ ಸೇವೆಯನ್ನು ರಾಜ್ಯ ಸರಕಾರ ಪ್ರಾರಂಭಿಸಿದೆ. ಈ ಕಾರ್ಯಕ್ರಮದಲ್ಲ ಹದಿನಾಲ್ಕು ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಿ ಚಿಕಿತ್ಸೆ ನೀಡಲಾಗುವದು. ಆಶಾ ಕಾರ್ಯಕರ್ತರು ಪ್ರತಿ ದಿನ ಐದು ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯ ತಪಾಸಣೆಗೆ ಒಳಪಡಿಸುವರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆಯ್.ಪಿ.ಗಡಾದ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್. ಗಡೇದ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ ದೊಡಮನಿ, ಜಿಲ್ಲೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.