Belagavi NewsBelgaum NewsKannada NewsKarnataka News

*ಸಕಾಲದಲ್ಲಿ ಕುಡಿಯುವ ನೀರಿನ ಮೂಲಗಳ ಸ್ವಚ್ಛತೆಯಾಗಲಿ : ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಹಲಗಾ ಹಾಗೂ ಬಸ್ತವಾಡ ಗ್ರಾಮ ಪಂಚಾಯತಿಗೆ  ಸೋಮವಾರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಭೇಟಿ ನೀಡಿ, ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಯನ್ನು ಪರಿಶೀಲನೆ ಮಾಡಿದರು.              

ಮನೆಗೆ ಅಳವಡಿಸಲಾಗಿರುವ ನಳ ಸಂಪರ್ಕದ ಬಗ್ಗೆ ಸ್ಥಳೀಯ ಫಲಾನುಭವಿಗಳೊಂದಿಗೆ ಚರ್ಚೆಮಾಡಿದರು. ಕಾರ್ಯಾತ್ಮಕ ನಳ ಸಂಪರ್ಕ ಬಗ್ಗೆ ಮಾಹಿತಿ ಪಡೆದುಕೊಂಡು ಗ್ರಾಮ-ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚೆ ಮಾಡಿದರು.

ಈ ವೇಳೆ ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ರವರು ಮಾತನಾಡಿ, ಗ್ರಾಮದಲ್ಲಿನ ಕುಡಿಯುವ ನೀರಿನ ಮೂಲಗಳ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕೆಂದು ತಿಳಿಸಿ, ನೀರಿನ ಟ್ಯಾಂಕಗಳ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ವಹಿಸಿ ಹಾಗೂ ಜಲ ಜೀವನ ಮಿಷನ್ ಯೋಜನೆಯಡಿ ಬಾಕಿ ಉಳಿದ ಗ್ರಾಮಗಳ ಕಾಮಗಾರಿಗಳನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಜನರಿಗೆ ನಳ ಸಂಪರ್ಕ ಒದಗಿಸಿ ನೀರು ಕೊಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡಿದರು. 

ನಂತರ ಬಸ್ಥವಾಡ ಗ್ರಾಮ ಪಂಚಾಯಿತಿಯ ಕೊಂಡಸ್ಕೊಪ್ಪ  ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಾತ್ಮಕ  ನಳ ಸಂಪರ್ಕ ನೀಡಿರುವ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸಹಾಯಕ ಇಂಜಿನಿಯರ್ ಮಾತನಾಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಈ ಗ್ರಾಮವನ್ನು ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ನೀಡಿದರು 

Home add -Advt

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ, ಇಇ ಕಿರಣ ಗೊರ್ಪಡೆ, ಎಇಇ ಎಸ್. ಎಫ್. ಶಿವಾಪೂರ, , ಇತರ ಎಇ, ಡಿ ಪಿ ಎಂ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ವರ್ಗದವರು  ಹಾಜರಿದ್ದರು.

Related Articles

Back to top button